Sunday, 11 April 2021

ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮ ಇಂದು ಸುಳ್ಯಕ್ಕೆ, ಸುಳ್ಯ ಗಾಂಧಿನಗರ ನವೀಕೃತ ಜುಮಾ ಮಸ್ಜಿದ್ ಉದ್ಘಾಟನೆ


 ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮ ಇಂದು ಸುಳ್ಯಕ್ಕೆ

ಸುಳ್ಯ ಗಾಂಧಿನಗರ ನವೀಕೃತ ಜುಮಾ ಮಸ್ಜಿದ್ ಉದ್ಘಾಟನೆ

ಸುಳ್ಯ: ಸುಳ್ಯ ಗಾಂಧಿನಗರ ನವೀಕೃತ ಜುಮಾ ಮಸ್ಜಿದ್ ಉದ್ಘಾಟನೆ ಎ.11ರಂದು (ಇಂದು) ಸಂಜೆ 4:00 ಕ್ಕೆ ನಡೆಯಲಿದೆ. ಖಾಝಿ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ‌ ಕೂರತ್ ವಕ್ಫ್ ನಿರ್ವಹಿಸುವರು. ಅಖಿಲ ಭಾರತ ಸುನ್ನಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮ ಕಾಂತಪುರಂ  ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟನೆ ಮಾಡುವರು. ಸಿರಾಜುಲ್ ಹುದಾ ಕುಟ್ಯಾಡಿ ಸ್ಥಾಪಕ ಪೆರೋಡ್ ಅಬ್ದುರಹ್ಮಾನ್ ಸಖಾಫಿ ಮುಖ್ಯ ಭಾಷಣ ಮಾಡಲಿದ್ದಾರೆ.

ಗಾಂಧಿನಗರ ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಆದಂಕುಂಞ ಕಮ್ಮಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಕ್ಸ್ ಬೋರ್ಡ್ ಸದಸ್ಯ ಶಾಫಿ ಸಅದಿ, ದ.ಕ.ಜಿಲ್ಲಾ ವಕ್ಸ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು ಕಣಚೂರು ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

SHARE THIS

Author:

0 التعليقات: