Sunday, 18 April 2021

ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ: ಸಚಿವ ಡಾ. ಸುಧಾಕರ್


 ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ: ಸಚಿವ ಡಾ. ಸುಧಾಕರ್

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೋನ ಪರಿಸ್ಥಿತಿ ಕೈಮೀರಿದ್ದು, ಕಠಿಣ ಕ್ರಮ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಕೊವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಇಲ್ಲದೆ ಹೋದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ. ಎ.19ರ ಸಭೆಯಲ್ಲಿ ಚರ್ಚೆ ಮಾಡಿ ಕಠಿಣ ನಿರ್ಧಾರ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಐಸಿಯು ಬೆಡ್‍ಗಳ ಸಮಸ್ಯೆ ಇದೆ. ಐಸಿಯು ಬೆಡ್‍ಗಳ ಸಮಸ್ಯೆ ಇಲ್ಲವೆಂದು ನಾನು ಹೇಳಲ್ಲ. ನಗರದಲ್ಲಿ ವಲಯವಾರು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.  ಕೆಲವು ನ್ಯೂನತೆಗಳಿದ್ದು ಅವುಗಳನ್ನು ಸರಿಪಡಿಸುತ್ತೇವೆ ಎಂದು ಡಾ.ಸುಧಾಕರ್ ತಿಳಿಸಿದ್ದಾರೆ.


SHARE THIS

Author:

0 التعليقات: