Wednesday, 21 April 2021

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: ಐವರು ಕೂಲಿ ಕಾರ್ಮಿಕರು ಮೃತ್ಯು, ಹಲವರ ಸ್ಥಿತಿ ಗಂಭೀರ


 ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: ಐವರು ಕೂಲಿ ಕಾರ್ಮಿಕರು ಮೃತ್ಯು, ಹಲವರ ಸ್ಥಿತಿ ಗಂಭೀರ

ಯಾದಗಿರಿ: ಟಂಟಂ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಐವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ನಡೆದಿದೆ.

ಮೃತರನ್ನು ಕಾಸಿಂ ಬೀ, ಭೀಮಬಾಯಿ, ಅಯ್ಯಮ್ಮ, ಶರಣಮ್ಮ ಮತ್ತು ದೇವಿಂದ್ರಮ್ಮ ಎಂದು ಗುರುತಿಸಲಾಗಿದೆ. ಇವರೆಲ್ಲರೂ ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಟಂಟಂ ವಾಹನದಲ್ಲಿ 10 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಮೃತಪಟ್ಟಿದ್ದರೆ, ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಳ್ಳೂರು ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. 


SHARE THIS

Author:

0 التعليقات: