Wednesday, 14 April 2021

ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ಹೆಚ್. ಡಿ ಕುಮಾರಸ್ವಾಮಿ


ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಕೋವಿಡ್‌ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದೆ , ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಂದು.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.SHARE THIS

Author:

0 التعليقات: