Friday, 23 April 2021

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ : ದಿನಬಳಕೆ ವಸ್ತುಗಳ ಖರೀದಿಗೆ ಸಮಯ ನಿಗದಿ


ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ : ದಿನಬಳಕೆ ವಸ್ತುಗಳ ಖರೀದಿಗೆ ಸಮಯ ನಿಗದಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಘೋಷಿಸಿದೆ. ಅದರಂತೆ ನಿನ್ನೆ ರಾತ್ರಿಯಿಂದ ನೈಟ್ ಕರ್ಪ್ಯೂ ಜಾರಿಗೊಂಡಿದೆ.

ನಿನ್ನೆ ರಾತ್ರಿಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಇಂದು ಮತ್ತು ನಾಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲ ಸೇವೆಗಳು ಬಂದ್ ಆಗಿರಲಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ದಿನ ಬಳಕೆ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ.

ಅಗತ್ಯ ವಸ್ತುಗಳಾದ ಹಾಲು, ತರಕಾರಿ ಖರೀದಿಗೆ ಅವಕಾಶ ನೀಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ಒಳಗೆ ಮಾತ್ರ ಖರೀದಿಗೆ ಅವಕಾಶ ನೀಡಿದ್ದು, 10 ಗಂಟೆಯ ಬಳಿಕ ಜನರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



SHARE THIS

Author:

0 التعليقات: