Friday, 16 April 2021

ಕರ್ನಾಟಕ ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಮತದಾನ ಆರಂಭ


ಕರ್ನಾಟಕ ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಮತದಾನ ಆರಂಭ

ಬೆಳಗಾವಿ : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನಕ್ಕೆ ಸಮಯ ನಿಗದಿಮಾಡಲಾಗಿದೆ. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಸ್ಪರ್ಧಿಸಿ ಶಾಸಕರಾಗಿದ್ದ ಪ್ರತಾಪ ಗೌಡ ಪಾಟೀಲರು ತಮ್ಮ ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ.

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಬಿಜೆಪಿಯಿಂದ ಸುರೇಶ್ ಅಂಗಡಿ ಪತ್ನಿ ಮಂಗಲಾ ಅಂಗಡಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನಿಂದ ಶಾಸಕ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದ್ದಾರೆ.

ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್ ನಿಂದ ಬಿ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಬಿ. ನಾರಾಯಣರಾವ್ ಸ್ಪರ್ಧಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಸ್ಪರ್ಧಿಸಿದ್ದಾರೆ. ಮಸ್ಕಿ ವಿಧಾನಸಭೆ ಉಪಚುನಾವಣೆ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಗೌಡ ಪಾಟೀಲ್ , ಕಾಂಗ್ರೆಸ್ ಪಕ್ಷದಿಂದ ಬಸನಗೌಡ ತುರವಿಹಾಳ ಸ್ಪರ್ಧಿಸಿದ್ದಾರೆ. ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಮೇ. 2 ರಂದು ಪ್ರಕಟವಾಗಲಿದೆ.SHARE THIS

Author:

0 التعليقات: