Tuesday, 20 April 2021

ಶಾಲಾ ಬೇಸಿಗೆ ರಜೆ, ಮುಂದಿನ ಶೈಕ್ಷಣಿಕ ವರ್ಷಾರಂಭದ ದಿನಾಂಕ ಪ್ರಕಟ


 ಶಾಲಾ ಬೇಸಿಗೆ ರಜೆ, ಮುಂದಿನ ಶೈಕ್ಷಣಿಕ ವರ್ಷಾರಂಭದ ದಿನಾಂಕ ಪ್ರಕಟ

ಬೆಂಗಳೂರು, ಎ.20: ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ಬೇಸಿಗೆ ರಜೆ ಮತ್ತು ಮುಂಬರುವ ಶೈಕ್ಷಣಿಕ ವರ್ಷಾರಂಭದ ದಿನಾಂಕವನ್ನು  ಪ್ರಕಟಿಸಿದೆ.

 ಒಂದರಿಂದ ಏಳು/ಎಂಟನೇ ತರಗತಿಗಳು ಇರುವ ಪ್ರಾಥಮಿಕ ಶಾಲೆಗಳಿಗೆ ಮೇ 1ರಿಂದ ಜೂನ್ 14ರವರಗೆ ಬೇಸಿಗೆ ರಜೆಯಾಗಿರುತ್ತದೆ. ಜೂ.15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

ಅದೇರೀತಿ ಪ್ರೌಢಶಾಲೆಗಳಿಗೆ ಅಂದರೆ 8 ಮತ್ತು 9ನೇ ತರಗತಿಗಳಲ್ಲಿನ ವಿದ್ಯಾರ್ಥಿಗಳಿಗೆ ಮೇ 1ರಿಂದ ಜುಲೈ 14ರವರೆಗೆ ಬೇಸಿಗೆ ರಜೆಯಾಗಿರುತ್ತದೆ.

ಪ್ರೌಢಶಾಲೆಗಳ ಶಿಕ್ಷಕರಿಗೆ ಜೂ.15ರಿಂದ ಜುಲೈ 14ರವರೆಗೆ ಬೇಸಿಗೆ ರಜೆ ಇರುತ್ತದೆ. ಜೂನ್ 21ರಿಂದ ಜುಲೈ 5ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತವೆ. ಜುಲೈ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

  ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ, ಇಲಾಖೆ ಮತ್ತು ಜಿಲ್ಲಾಡಳಿತಗಳು ನೀಡುವ ಸೂಚನೆ ಮತ್ತು ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.



SHARE THIS

Author:

0 التعليقات: