Saturday, 24 April 2021

ಮಂಗಳೂರು ಜೈಲಿನಲ್ಲಿ‌ ಕೈದಿಗಳ ಮಧ್ಯೆ ಹೊಡೆದಾಟ: ಇಬ್ಬರಿಗೆ ಗಾಯ

 


ಮಂಗಳೂರು ಜೈಲಿನಲ್ಲಿ‌ ಕೈದಿಗಳ ಮಧ್ಯೆ ಹೊಡೆದಾಟ: ಇಬ್ಬರಿಗೆ ಗಾಯ

ಮಂಗಳೂರು : ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದಲ್ಲಿ ರವಿವಾರ ಬೆಳಗ್ಗೆ ವಿಚಾರಣಾಧೀನ ಕೈದಿಗಳ ಮಧ್ಯೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ.

ಸಮೀರ್ ಎಂಬಾತ ಅನ್ಸಾರ್ ಎಂಬಾತನಿಗೆ ಸ್ಪೂನ್ ಸಹಿತ ಅಡುಗೆ ಪರಿಕರಗಳನ್ನು ಬಳಸಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಘಟನೆಯಲ್ಲಿ‌ ಝೈನುದ್ದೀನ್ ಎಂಬಾತನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಹಲ್ಲೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪಣಂಬೂರು‌ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಸಮೀರ್ ಎಂಬಾತ ಕಳೆದ ಜುಲೈನಿಂದ ಜೈಲಲ್ಲಿದ್ದಾನೆ. ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಆರೋಪಿ ಸಮೀರ್ ಮತ್ತು ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದ ಆರೋಪಿ ಝೈನುದ್ದೀನ್‌ಗೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


SHARE THIS

Author:

0 التعليقات: