ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು, ಮೇ 1: ಕೋವಿಡ್ ಸೇರಿದಂತೆ ಇತರ ಸಮಸ್ಯೆಗಳಿಂದ ನಿಂದ ಉಂಟಾಗಿರುವ ಉದ್ಯೋಗ ಮತ್ತು ಆರ್ಥಿಕ ನಷ್ಟವನ್ನು ಭರ್ತಿ ಮಾಡಲು ಇನ್ನು ಕೆಲ ವರ್ಷಗಳಲ್ಲಿ ಹಂತ ಹಂತವಾಗಿ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಸ್ವ ಉದ್ಯೋಗಕ್ಕೆ ಶಕ್ತಿ ನೀಡುವ ಹಿನ್ನೆಲೆಯಲ್ಲಿ ಶನಿವಾರ ಸಾಗರೋತ್ತರ ಕನ್ನಡಿಗರೊಂದಿಗೆ ʼಕರಕುಶಲ ಕಾಯಕ, ಕನ್ನಡ ಮತ್ತು ನಾವುʼ ಎಂಬ ವಿಷಯದ ಕುರಿತು ಸಂವಾದ ನಡೆಸಿದ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಗಳ ಮೂಲಕ ಇಷ್ಟು ಪ್ರಮಾಣದ ಉದ್ಯೋಗಾವಕಾಶಗಳನ್ನು ನಗರ, ಗ್ರಾಮೀಣ ಪ್ರದೇಶದಲ್ಲಿ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಯುವಜನರಿಗೆ ಕೌಶಲ್ಯ ತರಬೇತಿ ಕೊಡುವುದರ ಜತೆಗೆ, ಈಗಾಗಲೇ ಈ ವಲಯದಲ್ಲಿ ತೊಡಗಿಸಿಕೊಂಡಿರುವವರ ಕೌಶಲತೆಯನ್ನು ಉತ್ತಮಪಡಿಸುವ ಕೆಲಸವನ್ನೂ ಸರಕಾರ ಕೈಗೆತ್ತಿಕೊಂಡಿದೆ. ಅಲ್ಲದೆ, ಕರಕುಶಲ ವಲಯವೂ ಸೇರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ದಾರಿಯಲ್ಲಿ ಸಾಗುತ್ತಿರುವವರಿಗೆ ತಾಂತ್ರಿಕವಾಗಿ ಬಲ ತುಂಬುದು ಹಾಗೂ ಆರ್ಥಿಕ, ಮಾರುಕಟ್ಟೆ ವಿಸ್ತಾರಕ್ಕೆ ಸಾಥ್ ಕೊಡುವುದು ಮಾಡಲಾಗುತ್ತಿದೆ. ಕ್ರಮೇಣವಾಗಿ ಅವರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
0 التعليقات: