Friday, 28 May 2021

1.73 ಲಕ್ಷಕ್ಕೆ ಕುಸಿದ ಪ್ರತಿದಿನದ ಸೋಂಕಿತರ ಸಂಖ್ಯೆ


1.73 ಲಕ್ಷಕ್ಕೆ ಕುಸಿದ ಪ್ರತಿದಿನದ ಸೋಂಕಿತರ ಸಂಖ್ಯೆ

ನವದೆಹಲಿ,ಮೇ.29-ದಿನೇ ದಿನೇ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿಕೇವಲ 1,73 ಲಕ್ಷ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕಳೆದ 45 ದಿನಗಳಲ್ಲಿ ಅತ್ಯಂತ ಕಡಿಮೆ ಸೋಂಕು ಪ್ರಕರಣ ಇದಾಗಿದೆ. ನಿನ್ನೆಯಿಂದ 1,73,790 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ದೇಶದ ಒಟ್ಟು ಸೋಂಕಿತರ ಸಂಖ್ಯೆ 2,77 ಕೋಟಿ ಗಡಿ ದಾಟಿದೆ.

ಸತತ ಐದು ದಿನಗಳಿಂದ ಕೊರೊನಾ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆಯಾಗುತ್ತಿದೆ. ಇಂದಿನ ಪಾಸಿಟಿವಿಟಿ ದರ ಶೇ.8.36 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಉಲ್ಲೇಖಿಸಿವೆ. ನಿನ್ನೆಯಿಂದ 3617 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 3,22,512ಲಕ್ಕಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದ್ಯಾಂತ 20 ಲಕ್ಷಕ್ಕೂ ಹೆಚ್ಚು ಕೊರೊನಾ ತಪಾಸಣೆ ನಡೆಸಲಾಗಿದೆ. ಇದರೊಂದಿಗೆ ದೇಶದ 34 ಕೋಟಿಗೂ ಹೆಚ್ಚು ಮಂದಿಯ ರೋಗ ಪರೀಕ್ಷೆ ನಡೆಸಿದಂತಾಗಿದೆ.

ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.90.80 ರಷ್ಟಕ್ಕೆ ಏರಿಕೆಯಾಗಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 22,28,724 ಲಕ್ಷಕ್ಕೆ ಕುಸಿದಿದೆ. 2.77 ಕೋಟಿ ಸೋಂಕಿತರ ಪೈಕಿ ಈಗಾಗಲೇ 2.51 ಕೋಟಿ ಮಂದಿ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ.


SHARE THIS

Author:

0 التعليقات: