Friday, 14 May 2021

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ


ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರ, ಮೇ 14: ಅರೇಬಿಯಾ ಸಮುದ್ರದಲ್ಲಿ ನಿಮ್ಮ ಒತ್ತಡ ಪ್ರದೇಶ ಸೃಷ್ಟಿಯಾದುದರ ಪ್ರಭಾವದಿಂದ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಕೇರಳದ 3 ಜಿಲ್ಲೆಗಳಲ್ಲಿ ಮೇ 14ರ ವರೆಗೆ ಹಾಗೂ 5 ಜಿಲ್ಲೆಗಳಲ್ಲಿ ಮೇ 15ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಆಡಳಿತ ತಿಳಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಅಧಿಕಾರಿಗಳು ಹಾಗೂ ಜನರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟ್ವೀಟ್ನಲ್ಲಿ ಸೂಚಿಸಿದ್ದಾರೆ.

ಮೇ 14ರ ವರೆಗೆ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಮೇ 15ರ ವರೆಗೆ ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಎಂದು ವಿಜಯನ್ ಅವರು ಟ್ವೀಟ್ ಮಾಡಿದ್ದಾರೆ.

ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಪ್ರದೇಶದಿಂದಾಗಿ ಮೇ 16ರಂದು ತೀವ್ರ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಕೇರಳದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರ ನೀಡಿದ ಬಳಿಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ನಲ್ಲಿ ಈ ಸೂಚನೆ ನೀಡಿದ್ದಾರೆ.


 SHARE THIS

Author:

0 التعليقات: