ಕಪ್ಪು ಶಿಲೀಂಧ್ರ ಸೋಂಕಿಗೆ 52 ಮಂದಿ ಬಲಿ
ಮುಂಬೈ, ಮೇ 14: ಕಳೆದ ಷರ್ಷ ಕೊರೋನ ಸೋಂಕು ಹರಡಲು ಆರಂಭವಾದ ಬಳಿಕ ಮಹಾರಾಷ್ಟ್ರದಲ್ಲಿ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕಿನಿಂದ 52ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಎಂದು ಹಿರಿಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಕೊರೋನ ಸೋಂಕಿನಿಂದ ಗುಣಮುಖರಾದವರು ಹಾಗೂ ಗುಣಮುಖರಾಗುತ್ತಿ ರುವವರಲ್ಲಿ ತಲೆನೋವು, ಜ್ವರ, ಕಣ್ಣಿನ ಅಡಿಭಾಗದಲ್ಲಿ ನೋವು, ಮೂಗು ಅಥವಾ ಸೈನಸ್ ಕಟ್ಟುವಿಕೆ ಹಾಗೂ ಭಾಗಶಃ ದೃಷ್ಟಿ ನಾಶದಂತಹ ರೋಗಲಕ್ಷಣಗಳನ್ನು ಹೊಂದಿರುವ ಈ ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾದ ಬಳಿಕ ಈ ಬಗ್ಗೆ ಹೆಚ್ಚು ಆತಂಕ ಸೃಷ್ಟಿಯಾಗಿದೆ. ಕಳೆದ ವರ್ಷ ಕೊರೋನ ಸೋಂಕು ಹರಡಲು ಆರಂಭವಾದ ಬಳಿಕ ಮಹಾರಾಷ್ಟ್ರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಕನಿಷ್ಠ 52 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಕೊರೋನ ಸೋಂಕಿನಿಂದ ಗುಣಮುಖರಾದವರು. ಆದರೆ, ಕಪ್ಪು ಶಿಲೀಂಧ್ರ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಬಾರಿಗೆ ರಾಜ್ಯ ಆರೋಗ್ಯ ಇಲಾಖೆ ಕಪ್ಪು ಶಿಲೀಂದ್ರ ಸೋಂಕಿನಿಂದ ಸಾವನ್ನಪ್ಪಿದವರ ಪಟ್ಟಿ ಮಾಡಿದೆೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೊರೋನ ಸೋಂಕಿನ ಎರಡನೇ ಅಲ್ಲೆಯಲ್ಲಿ ರಾಜ್ಯದಲ್ಲಿ 1,500ಕ್ಕೂ ಅಧಿಕ ಕಪ್ಪು ಶಿಲೀಂಧ್ರ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಬುಧವಾರ ಹೇಳಿದ್ದರು.
0 التعليقات: