Sunday, 2 May 2021

ಹರಿಯಾಣದಲ್ಲಿ ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಯಲ್ಲೇ 8 ಮಂದಿ ಸಾವು


ಹರಿಯಾಣದಲ್ಲಿ ಆಕ್ಸಿಜನ್ ಕೊರತೆಯಿಂದ ಆಸ್ಪತ್ರೆಯಲ್ಲೇ 8 ಮಂದಿ ಸಾವು

ಹರಿಯಾಣ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಹರಿಯಾಣದ ಗುರುಗ್ರಾಮದ ಕೀರ್ತಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 8 ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹರಿಯಾಣದ ಗುರುಗ್ರಾಮದ ಕೀರ್ತಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣ ರೋಗಿಗಳಿಗೆ ಆಕ್ಸಿಜನ್ ಸರಬರಾಜು ಸ್ಥಗಿತಗೊಂಡು 8 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು, ವೈದ್ಯರು ಮತ್ತು ಆಸ್ಪತ್ರೆಯ ಮೇಳೆ ದಾಳಿ ನಡೆಸಿದ್ದಾರೆ.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದು, ಘಟನೆ ಸಂಬಂಧ ತನಿಖೆ ಕೈಗೊಂಡಿದ್ದಾರೆ.


SHARE THIS

Author:

0 التعليقات: