Friday, 21 May 2021

ಬೆಂಗಳೂರಿನಲ್ಲಿ ಇಂದು 'ಲಾಕ್ ಡೌನ್' ಉಲ್ಲಂಘಿಸಿದ 871 ವಾಹನಗಳು ಸೀಜ್, 11 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಇಂದು 'ಲಾಕ್ ಡೌನ್' ಉಲ್ಲಂಘಿಸಿದ 871 ವಾಹನಗಳು ಸೀಜ್, 11 ಮಂದಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟದಿಂದಾಗಿ ಲಾಕ್ ಡೌನ್ ಘೋಷಿಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ವಾಹನ ರಸ್ತೆಗೆ ಇಳಿಯುವಂತಿಲ್ಲ ಎಂಬುದಾಗಿಯೂ ನಿಯಮ ಇದೆ. ಆದ್ರೇ.. ಈ ನಿಯಮ ಪಾಲನೆ ಮಾಡದೇ ಬೆಂಗಳೂರಿನಲ್ಲಿ ರಸ್ತೆಗೆ ಇಳಿದಂತ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಿದ್ದಾರೆ.

ಬೆಂಗಳೂರು ಪೊಲೀಸ್ ಮೂಲಗಳ ಪ್ರಕಾರ ಇಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 871 ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಇದರಲ್ಲಿ 791 ದ್ವಿಚಕ್ರ ವಾಹನ, 22 ಆಟೋ, 58 ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹಾಗೂ ಕೊರೊನಾ ನಿಯಮ ಉಲ್ಲಂಘಿಸಿದವರ ವಿರುದ್ಧ ಎನ್ ಡಿಎಂ ಕಾಯಿದೆ ಅಡಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಲಾಕ್ ಡೌನ್ ಜೂನ್ 7 ರವರೆಗೆ ಜಾರಿಯಲ್ಲಿ ಇರಲಿದ್ದು, ಲಾಕ್ ಡೌನ್ ನಿಯಮ ಮೀರಿ, ರಾಜ್ಯ ರಾಜಧಾನಿಯಲ್ಲಿ ರಸ್ತೆಗೆ ಇಳಿಯುವಂತ ವಾಹನಗಳನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ಅಲ್ಲಿಯವರೆಗೆ ಮುಂದುವರೆಯಲಿದೆ. ಸೋ ನೀವು ಮನೆಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಹೊರ ಬರೋ ಮೊದಲು ಈ ಬಗ್ಗೆ ಎಚ್ಚರಿಕೆ ಇರಲಿ.

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಬೆಳಿಗ್ಗೆ 9.45 ಆದ್ರೂ ನಂತ್ರವೂ ಜನರು ತಿರುಗಾಡುತ್ತಿದ್ದಾರೆ. ಇದಕ್ಕೆ ಇನ್ಮುಂದೆ ಅವಕಾಶ ಇಲ್ಲ. ಪೊಲೀಸರಿಗೆ ಸೂಚಿಸಲಾಗಿದೆ. ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ವಾರ್ನ್ ಮಾಡಿದ್ದಾರೆ.

SHARE THIS

Author:

0 التعليقات: