ಗೋವಾದಲ್ಲಿ ಮೇ 9ರಿಂದ 15 ದಿನ ಕರ್ಫ್ಯೂ ಜಾರಿ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಗೋವಾದಲ್ಲಿ ಮೇ 9ರಿಂದ ಹದಿನೈದು ದಿನಗಳ ಕಾಲ ರಾಜ್ಯದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಮುಂದುವರೆದು, ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಜನರು ಅಥವಾ ಪ್ರವಾಸಿಗರು ಕೋವಿಡ್ 19 ನೆಗೆಟಿವ್ ವರದಿ ಅಥವಾ ಲಸಿಕೆ ತೆಗೆದುಕೊಂಡ ಸರ್ಟಿಫಿಕೇಟ್ ತರುವುದು ಕಡ್ಡಾಯ ಎಂದು ಗೋವಾ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಲಾಕ್ ಡೌನ್ ವೇಳೆ ಎಲ್ಲಾ ಕಾರ್ಯಕ್ರಮಗಳು, ಮದುವೆ ಸಮಾರಂಭ ನಿಷೇಧಿಸಲಾಗಿದೆ ಎಂದು ಹೇಳಿದರು. ಕರ್ಫ್ಯೂ ಸಂದರ್ಭದಲ್ಲಿ ದಿನಸಿ ಅಂಗಡಿ ತೆರೆಯಲು ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಮೆಡಿಕಲ್ ಶಾಪ್ ಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
0 التعليقات: