Tuesday, 4 May 2021

ಮಂಜೇಶ್ವರ : ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


 ಮಂಜೇಶ್ವರ : ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಮಂಜೇಶ್ವರ : ಕಾರು ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ಉಪ್ಪಳ ಗೇಟ್ ಸಮೀಪದ ಅಬ್ದುಲ್ ರಶೀದ್ (65) ಎಂದು ಗುರುತಿಸಲಾಗಿದೆ. ಅವರ ಸಂಬಂಧಿ ಮುಹಮ್ಮದ್ ಅನೀಸ್ (24) ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಲಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಕುಂಬಳೆಯತ್ತ ಹೋಗುತ್ತಿದ್ದ ಕಾರಿನ ನಡುವೆ ಅಪಘಾತ ಉಂಟಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಶೀದ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


SHARE THIS

Author:

0 التعليقات: