Sunday, 2 May 2021

ಮಸ್ಕಿಯಲ್ಲಿ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ್ ರಿಗೆ ಭರ್ಜರಿ ಜಯ: ಅಧಿಕೃತ ಘೋಷಣೆ ಬಾಕಿ


 ಮಸ್ಕಿಯಲ್ಲಿ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ್ ರಿಗೆ ಭರ್ಜರಿ ಜಯ: ಅಧಿಕೃತ ಘೋಷಣೆ ಬಾಕಿ

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಬಸನಗೌಡ ತುರುವಿಹಾಳ್ ಅವರು 24 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗವು ಫಲಿತಾಂಶದ ಅಂತಿಮ ಘೋಷಣೆ ಇನ್ನಷ್ಟೇ ಮಾಡಬೇಕಿದೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಬಸನಗೌಡ ಅವರು ಎಲ್ಲೂ ಪ್ರತಿಸ್ಪರ್ಧಿ ಪ್ರತಾಪಗೌಡ ಪಾಟೀಲರಿಗೆ ಮುನ್ನಡೆಗೆ ಅವಕಾಶ ನೀಡಲೇ ಇಲ್ಲ. ಅಂತಿಮವಾಗಿ ಅವರು ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಈ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಸಫಲವಾಗಿದೆ.

ಕಾಂಗ್ರೆಸ್ ಶಾಸಕರಾಗಿದ್ದ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿಗೆ ಸೇರ್ಪಡೆಯಾಗಿದ್ದರಿಂದ ಇಲ್ಲಿ ಉಪ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೆ, ಬಿಜೆಪಿಯಲ್ಲಿದ್ದ ಬಸನಗೌಡ ತುರುವಿಹಾಳ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರಲ್ಲದೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದರು. ಇಲ್ಲಿನ ಇಬ್ಬರು ನಾಯಕರು ಪರಸ್ಪರ ಪಕ್ಷಗಳನ್ನು ಬದಲಾಯಿಸಿ ರಾಜಕೀಯ ಅದೃಷ್ಟ ಪರೀಕ್ಷೆಗಿಳಿದಿದ್ದರು. 


SHARE THIS

Author:

0 التعليقات: