ಬಿಜೆಪಿ ಅಭ್ಯರ್ಥಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಸೋಲು
ಚೆನ್ನೈ, ಮೇ 2: ಬಿಜೆಪಿ ಅಭ್ಯರ್ಥಿಯಾಗಿ ತಮಿಳುನಾಡು ವಿಧಾನಸಭೆಗೆ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪರಾಭವಗೊಂಡಿದ್ದಾರೆ. ಅರುವಕುರಿಚ್ಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಅವರನ್ನು ಡಿಎಂಕೆಯ ಆರ್.ಎಳಂಗೊ ಸೋಲಿಸಿದ್ದಾರೆ. ಕರ್ನಾಟಕದ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಅಧೀಕ್ಷಕರಾಗಿ ಅಣ್ಣಾಮಲೈ ಸೇವೆ ಸಲ್ಲಿಸಿದ್ದರು. ಕಳೆದ ವರ್ಷ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ತಿಂಗಳುಗಳ ಬಳಿಕ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
0 التعليقات: