Monday, 3 May 2021

'ಸಾವು ಅಥವಾ ಕೊಲೆಯೋ ?': ಚಾಮರಾಜನಗರ ಆಸ್ಪತ್ರೆಯ ದುರಂತದ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ


 'ಸಾವು ಅಥವಾ ಕೊಲೆಯೋ ?': ಚಾಮರಾಜನಗರ ಆಸ್ಪತ್ರೆಯ ದುರಂತದ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಇದು ಸಾವು ಅಥವಾ ಕೊಲೆಯೇ ಎಂದು ಪ್ರಶ್ನಿಸಿದ್ದಾರೆ.

'ಇದು ಸಾವು ಅಥವಾ ಕೊಲೆಯೋ ? ಸಾವನ್ನಪ್ಪಿರುವರ ಕುಟುಂಬಗಳಿಗೆ ನನ್ನ ಸಂತಾಪ. ವ್ಯವಸ್ಥೆ ಎಚ್ಚರಗೊಳ್ಳುವ ಮೊದಲು ಇನ್ನೂ ಇಂತಹ ಎಷ್ಟು ಸಾವು ನೋವುಗಳು ಸಂಭವಿಸಲಿದೆಯೋ?' ಎಂದು ಘಟನೆಯ ಬಗೆಗಿನ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಘಟನೆ ಏನು ?: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗಿನ ಅವಧಿಯಲ್ಲಿ ಒಟ್ಟು 23 ಕೋವಿಡ್ ರೋಗಿಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈ ಪೈಕಿ ಹಲವು ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. 

'ಸಾವನ್ನಪ್ಪಿರುವ 23 ಮಂದಿಯ ಪೈಕಿ 18 ಮಂದಿ ಕೋವಿಡ್ ಜೊತೆಗೆ ಬೇರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರೆಲ್ಲರೂ ಕಳೆದ 2 ವಾರಗಳಿಂದ ಆಸ್ಪತ್ರೆಯಲ್ಲಿದ್ದು, ವೆಂಟಿಲೇಟರ್ ನಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದ್ದರಿಂದ ಈ ಎಲ್ಲರ ಸಾವಿಗೆ ಆಕ್ಸಿಜನ್ ಕೊರತೆ ಎಂದು ಹೇಳುವುದು ಸರಿಯಲ್ಲ' ಎಂದು ಚಾಮರಾಜನಗರ ಜಿಲ್ಲಾಧಿಕಾರಿ‌ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ.


SHARE THIS

Author:

0 التعليقات: