Wednesday, 19 May 2021

ಕೊರೋನ ಸೋಂಕಿತರಿಗೆ ಆ್ಯಂಬುಲೆನ್ಸ್ ಸೇವೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ಕೊರೋನ ಸೋಂಕಿತರಿಗೆ ಆ್ಯಂಬುಲೆನ್ಸ್ ಸೇವೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು, ಮೇ 19: ಕೊರೋನ ಸೋಂಕಿತರಿಗೆ, ವಾರಿಯರ್ಸ್, ಕೂಲಿ ಕಾರ್ಮಿಕರು, ನಿರಾಶ್ರಿತರಿಗೆ, ಉಚಿತ ಊಟ, ಔಷಧಿ ವಿತರಣೆ ಮತ್ತು ಆ್ಯಂಬುಲೆನ್ಸ್ ಸೇವೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.

ಬಸವನಗುಡಿ ವಿಧಾನಸಭಾ ಕ್ಷೇತ್ರದ 6ನೆ ವಾರ್ಡ್‍ನ ಜನರಿಗೆ ಸಾಂಕೇತಿಕವಾಗಿ ಊಟ ಅವಶ್ಯಕ ವಿತರಣೆ ಮಾಡುವ ಕೆಲಸ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಸ್ತರಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಕೊರೋನ ಸೋಂಕಿನಿಂದ ರಾಜ್ಯದ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕಷ್ಟದಲ್ಲಿರುವ ಜನರಿಗೆ ಪಕ್ಷದ ವತಿಯಿಂದ ಸಾಧ್ಯವಾದಷ್ಟೂ ನೆರವು ನೀಡುವಂತೆ ಅವರು ಮನವಿ ಮಾಡಿದರು.

ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಸಲೀಂ ಮಹಮದ್, ಹಿರಿಯ ಮುಖಂಡ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಜಿಲ್ಲಾ ಅಧ್ಯಕ್ಷ ಜಿ.ಕೃಷ್ಣಪ್ಪ, ಡಾ.ಶಂಕರ್ ಗುಹಾ ಉಪಸ್ಥಿತರಿದ್ದರು.SHARE THIS

Author:

0 التعليقات: