ಚಾಮರಾಜನಗರ ಕೋವಿಡ್ ಆಸ್ಪತ್ರೆ ಎದುರು ಸಾರ್ವಜನಿಕರ ಧರಣಿ: ಹಲವರು ಪೊಲೀಸ್ ವಶಕ್ಕೆ
ಚಾಮರಾಜನಗರ, ಮೇ.3: ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರ ಸರಣಿ ಸಾವಿನ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಜಿಲ್ಲಾ ಕೋವಿಡ್ ಆಸ್ಪತ್ರೆಯ ಎದುರು ಧರಣಿ ನಡೆಸಿದರು. ಈ ಸಂದರ್ಭ ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದರು.
ಕೋವಿಡ್ ಆಸ್ಪತ್ರೆಯ ಆವರಣದಲ್ಲಿ ಧರಣಿ ನಡೆಸಿದ ಸಾರ್ವಜನಿಕರು ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಧರಣಿನಿರತರನ್ನು ವಶಕ್ಕೆ ಪಡೆದ ಪೊಲೀಸರು, ವಾಹನದಲ್ಲಿ ಬೇರೆ ಕಡೆ ಕರೆದುಕೊಂಡು ಹೋದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಸ್ಪತ್ರೆಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಧರಣಿನಿರತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
0 التعليقات: