Monday, 3 May 2021

ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಸಚಿವರಾದ ಡಾ.ಸುಧಾಕರ್, ಸುರೇಶ್ ಕುಮಾರ್ ಭೇಟಿ

ಚಾಮರಾಜನಗರ, ಮೇ 3: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  23 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಇಂದು ಅಪರಾಹ್ನ ಆಗಮಿಸಿದ್ದಾರೆ.

ಅಪರಾಹ್ನ 2 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿದ ಇಬ್ಬರು ಸಚಿವರು ನೇರವಾಗಿ ಕೋವಿಡ್ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳ ಕೊಠಡಿಯಲ್ಲಿ ವೈದ್ಯರು ಮತ್ತು ಜಿಲ್ಲಾಧಿಕಾರಿಯೊಂದಿಗೆ ಸಭೆಗೆ ಮುಂದಾದರು.

ಈ ಸಭೆಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಮೆಡಿಕಲ್ ಕಾಲೇಜಿನ ಡೀನ್ ಡಾ.ಸಂಜೀವ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಸಾರಾ ಥಾಮಸ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ. ಡಾ.ಸುಧಾಕರ್, ಸುರೇಶ್ ಕುಮಾರ್ ಭೇಟಿ

ಚಾಮರಾಜನಗರ, ಮೇ 3: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  23 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಇಂದು ಅಪರಾಹ್ನ ಆಗಮಿಸಿದ್ದಾರೆ.

ಅಪರಾಹ್ನ 2 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿದ ಇಬ್ಬರು ಸಚಿವರು ನೇರವಾಗಿ ಕೋವಿಡ್ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳ ಕೊಠಡಿಯಲ್ಲಿ ವೈದ್ಯರು ಮತ್ತು ಜಿಲ್ಲಾಧಿಕಾರಿಯೊಂದಿಗೆ ಸಭೆಗೆ ಮುಂದಾದರು.

ಈ ಸಭೆಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಮೆಡಿಕಲ್ ಕಾಲೇಜಿನ ಡೀನ್ ಡಾ.ಸಂಜೀವ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಸಾರಾ ಥಾಮಸ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.

SHARE THIS

Author:

0 التعليقات: