Friday, 21 May 2021

'ಬ್ಲ್ಯಾಕ್ ಫಂಗಸ್' ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ : 'ಸಿಎಂ ಯಡಿಯೂರಪ್ಪ' ಘೋಷಣೆ


'ಬ್ಲ್ಯಾಕ್ ಫಂಗಸ್' ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ : 'ಸಿಎಂ ಯಡಿಯೂರಪ್ಪ' ಘೋಷಣೆ

ಬೆಂಗಳೂರು : ಬ್ಲ್ಯಾಕ್ ಫಂಗಸ್ ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ರಾಜ್ಯದ ಜಿಲ್ಲಾ ಆಸ್ಪತ್ರೆಗಳ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಲಿದ್ದು, ಸರ್ಕಾರವೇ ಚಿಕಿತ್ಸೆಯ ವೆಚ್ಚ ಭರಿಸಲಿದೆ ಎಂದು ಮಾಹಿತಿ ನೀಡಿದರು.

ಬ್ಲಾಕ್ ಫಂಗಸ್ ರೋಗಕ್ಕೆ ಚಿಕಿತ್ಸೆ ಪಡೆಯಲು ಹೆಚ್ಚಿನ ಹಣದ ಅಗತ್ಯವಿರುವುದರಿಂದ ಜನ ಸಾಮಾನ್ಯರಿಗೆ ಕಷ್ಟವಾಗುತ್ತದೆ., ಆದ್ದರಿಂದ ಬ್ಲ್ಯಾಕ್ ಫಂಗಸ್ ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ತೀರ್ಮಾನಿಸಿರುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನೂ, ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
SHARE THIS

Author:

0 التعليقات: