Saturday, 1 May 2021

ಪಶ್ಚಿಮ ಬಂಗಾಳದಲ್ಲಿ `ಟಿಎಂಸಿ' ಗೆ ಮುನ್ನಡೆ


ಪಶ್ಚಿಮ ಬಂಗಾಳದಲ್ಲಿ `ಟಿಎಂಸಿ' ಗೆ ಮುನ್ನಡೆ

ನವದೆಹಲಿ : ಕರ್ನಾಟಕದ ಮೂರು ಕ್ಷೇತ್ರ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು- ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಟಿಎಂಸಿ 57 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 52 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಹಿನ್ನಡೆಯಾಗಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 56 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಎಲ್ ಡಿಎಫ್ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಡಿಎಫ್ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.





SHARE THIS

Author:

0 التعليقات: