Saturday, 8 May 2021

ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ


 ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಈಗಾಗಲೇ ನಿಗದಿಯಾದ ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ಮತ್ತು ಕುಟುಂಬದ ಆಪ್ತರು ಸೇರಿ ಕೇವಲ 40 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ.

ಮದುವೆ ಸಮಾರಂಭವನ್ನು ಕಲ್ಯಾಣ ಮಂಟಪ ಅಥವಾ ಸಭಾಂಗಣದಲ್ಲಿ ನಡೆಸುವಂತಿಲ್ಲ ಎಂದು ಆದೇಶ ಹೇಳಿದೆ.

ಪರಿಷ್ಕೃತ ಆದೇಶವನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌ ಶನಿವಾರ ಹೊರಡಿಸಿದ್ದಾರೆ.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತರಿಂದ ಹಾಗೂ ಜಿಲ್ಲೆಗಳಲ್ಲಿ ತಹಶೀಲ್ದಾರ್‌ಗಳಿಂದ ಮದುವೆ ಆಮಂತ್ರಣದ ಜೊತೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಹಾಗೂ ಅರ್ಜಿ ಆಧರಿಸಿ 40 ಪಾಸ್‌ಗಳನ್ನು ವಿತರಿಸಲಾಗುವುದು. ಪಾಸ್‌ ಇದ್ದವರಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದು’ ಎಂದು ಪರಿಷ್ಕೃತ ಆದೇಶದಲ್ಲಿ ತಿಳಿಸಲಾಗಿದೆ.


SHARE THIS

Author:

0 التعليقات: