Wednesday, 2 June 2021

ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ​​ಗೆ 10 ಸಾವಿರ ರೂ. ದಂಡ!


ಕೋವಿಡ್ ನಿಯಮ ಉಲ್ಲಂಘನೆ ಆರೋಪ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ​​ಗೆ 10 ಸಾವಿರ ರೂ. ದಂಡ!

ಹುಬ್ಬಳ್ಳಿ: ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಹಿನ್ನಲೆಯಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ 0 ಸಾವಿರ ರೂಪಾಯಿ ದಂಡ ವಿಧಿಸಿದೆ.

ಮೇ 31ರಂದು ಸಂಜೆ ಹುಬ್ಬಳ್ಳಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್ ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ಸ್​​ ಹಾಕಿದ ಆರೋಪದ ಮೇಲೆ ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿರುವುದಾಗಿ ಪಾಲಿಕೆ ಪರಿಸರ ಎಂಜಿನಿಯರ್‌ ನಯನ ತಿಳಿಸಿದ್ದಾರೆ.


SHARE THIS

Author:

0 التعليقات: