Tuesday, 15 June 2021

ಟ್ರಕ್-ಕಾರು ಡಿಕ್ಕಿ, ಒಂದೇ ಕುಟುಂಬದ 10 ಮಂದಿ ಮೃತ್ಯು


ಟ್ರಕ್-ಕಾರು ಡಿಕ್ಕಿ, ಒಂದೇ ಕುಟುಂಬದ 10 ಮಂದಿ ಮೃತ್ಯು

ಅಹಮದಾಬಾದ್: ಗುಜರಾತ್‌ನ ಆನಂದ್ ಜಿಲ್ಲೆಯ ತಾರಾಪುರ ಹೆದ್ದಾರಿಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಒಂದೇ  ಕುಟುಂಬದ 10 ಸದಸ್ಯರುಗಳು  ಮೃತಪಟ್ಟಿದ್ದಾರೆ.

ಕುಟುಂಬವು ಸೂರತ್‌ನಿಂದ ಭಾವನಗರಕ್ಕೆ ಪ್ರಯಾಣಿಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರು ಇಂದ್ರನಾಜ್ ಗ್ರಾಮದ ಬಳಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಇಬ್ಬರು ಮಹಿಳೆಯರು, ಏಳು ಪುರುಷರು ಹಾಗೂ ಒಂದು  ಮಗು ಮೃತಪಟ್ಟಿದ್ದಾರೆ. ಮೃತದೇಹಗಳನ್ನು ತಾರಾಪುರ ರೆಫರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಅಪಘಾತದ ನಂತರ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಸಂತ್ರಸ್ತರ ಕುಟುಂಬಕ್ಕೆ ಸಹಾಯ ಮಾಡುವ ಭರವಸೆ ನೀಡಿದರು.SHARE THIS

Author:

0 التعليقات: