ರಾಜ್ಯದಲ್ಲಿಂದು ಕೊರೋನಾಗೆ 120 ಮಂದಿ ಬಲಿ, 6835 ಹೊಸ ಕೇಸ್..!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಕ್ರಮಣವಾಗಿ ಕಡಿಮೆಯಾಗುತ್ತಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 120 ಪ್ರಾಣ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 6835 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2771969 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 33033ಕ್ಕೆ ಏರಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ 1470 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 23 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1198158 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 15319 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಇಂದು ರಾಜ್ಯಾದ್ಯಂತ 15409 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 2566774 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.56% ರಷ್ಟಿದೆ.
0 التعليقات: