Monday, 7 June 2021

ಸ್ಯಾನಿಟೈಸರ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, 17 ಮಂದಿ ಸಾವು


ಸ್ಯಾನಿಟೈಸರ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, 17 ಮಂದಿ ಸಾವು

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿರಂಗುತ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 17 ಮಂದಿ ಸಾವನ್ನಪ್ಪಿದ್ದಾರೆ.

ಮಧ್ಯಾಹ್ನದ ನಂತರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಇಡೀ ಕಾರ್ಖಾನೆಗೆ ವ್ಯಾಪಿಸಿದೆ. ಲವಾಸಾ ರಸ್ತೆಯ ಉರ್ವಾಡೆ ಗ್ರಾಮದಲ್ಲಿರುವ ಎಸ್‌ವಿಎಸ್ ಆಕ್ವಾ ಟೆಕ್ನಾಲಜೀಸ್ ಸ್ಯಾನಿಟೈಜರ್ ಕಂಪನಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಮಹಿಳೆಯರು ಸೇರಿ 15 -20 ಮಂದಿ ಕಾರ್ಮಿಕರು ಬೆಂಕಿ ಕೆನ್ನಾಲಿಗೆಯಲ್ಲಿ ಸಿಲುಕಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. 4 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ.


SHARE THIS

Author:

0 التعليقات: