Tuesday, 8 June 2021

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ, 18 ಮಂದಿ ಅಗ್ನಿಗಾಹುತಿ


ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ, 18 ಮಂದಿ ಅಗ್ನಿಗಾಹುತಿ

ಪೂನಾ,ಜೂ.8-ರಾಸಾಯನಿಕ ಕಾರ್ಖಾನೆಯಲ್ಲಿ ನಡೆದ ಆಕಸ್ಮಿಕ ಅಗ್ನಿ ದುರಂತದಲ್ಲಿ 18ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪೂನಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮತ್ತಷ್ಟು ಮಂದಿ ಸಾವನ್ನಪ್ಪಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ಮುಂದುವರೆಸಲಾಗಿದೆ.ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಗೃಹಸಚಿವ ದಿಲೀಪ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದುವರೆಗೂ ಘಟನಾ ಸ್ಥಳದಿಂದ ಸುಟ್ಟು ಕರಕಲಾಗಿದ್ದ 18 ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಎಸ್‍ಪಿ ಅಭಿನವ್ ದೇಶ್‍ಮುಖ್ ತಿಳಿಸಿದ್ದಾರೆ.

ಕ್ಲೋರಿಕ್ ಡೈಆಕ್ಸೆಡ್ ಮತ್ತಿತರ ರಾಸಾಯನಿಕ ಉತ್ಪಾದಿಸುವ ಎಸ್‍ವಿಎಸ್ ಆಕ್ವಾ ಕಾರ್ಖಾನೆಯಲ್ಲಿ 17 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು ನಿನ್ನೆ ಸಂಜೆ ದುರಂತ ಸಂಭವಿಸಿದ ನಂತರ ಎಲ್ಲರೂ ಮೃತಪಟ್ಟಿರುವ ಸಾಧ್ಯತೆ ಇದೆ.

ಕಾರ್ಖಾನೆ ಮಾಲೀಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.

ನಿನ್ನೆ ತಡರಾತ್ರಿವರೆಗೂ ಶೋಧ ಕಾರ್ಯ ನಡೆಸಲಾಯಿತು. ಇಂದು ಮುಂಜಾನೆ ಮತ್ತೆ ಶೋಧ ಕಾರ್ಯವನ್ನು ಮುಂದುವರೆಸಲಾಗಿದೆ.


SHARE THIS

Author:

0 التعليقات: