Friday, 4 June 2021

ರಾಮನಗರ ಮ್ಯಾನ್ ಹೋಲ್ ದುರಂತ :ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 18.5 ಲಕ್ಷ ಹಾಗೂ 10 ಲಕ್ಷ ರೂ. ಪರಿಹಾರ ಘೋಷಣೆ


ರಾಮನಗರ ಮ್ಯಾನ್ ಹೋಲ್ ದುರಂತ :ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 18.5 ಲಕ್ಷ ಹಾಗೂ 10 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ರಾಮನಗರದಲ್ಲಿ ಮೂವರು ವ್ಯಕ್ತಿಗಳು ಮ್ಯಾನ್‌ಹೋಲ್‌ಗೆ ಇಳಿದು ಮೃತಪಟ್ಟ ಘಟನೆ ಇಂದು ನಡೆದಿದ್ದು, ರಾಜ್ಯ ಸರಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಒಬ್ಬರು ಈ ದುರಂತದಲ್ಲಿ ಮೃತಪಟ್ಟಿದ್ದು, ಪರಿಶಿಷ್ಟ ಜಾತಿಯ ಸಂತ್ರಸ್ತರ ಕುಟುಂಬಗಳಿಗೆ ತಲಾ 18.5 ಲಕ್ಷ ರೂ. ಹಾಗೂ ಹಿಂದುಳಿದ ವರ್ಗದ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ಪ್ರಕಟಿಸಿದೆ. , ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಈ ಕುರಿತು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆದಿದ್ದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


SHARE THIS

Author:

0 التعليقات: