Friday, 4 June 2021

ನೌಕಾಪಡೆಗೆ 43 ಸಾವಿರ ಕೋಟಿ ರೂ ವೆಚ್ಚದಲ್ಲಿ 6 ಜಲಾಂತರ್ಗಾಮಿ ನೌಕೆಗಳ ನಿರ್ಮಾಣ


ನೌಕಾಪಡೆಗೆ  43 ಸಾವಿರ ಕೋಟಿ ರೂ ವೆಚ್ಚದಲ್ಲಿ 6 ಜಲಾಂತರ್ಗಾಮಿ ನೌಕೆಗಳ ನಿರ್ಮಾಣ


ನವದೆಹಲಿ: ಭಾರತೀಯ ನೌಕಾಪಡೆಗಾಗಿ ಸುಮಾರು 43,000 ಕೋಟಿ ರೂ.ಗಳ ವೆಚ್ಚದಲ್ಲಿ ಆರು ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸುವ ಮೆಗಾ ಯೋಜನೆಗೆ ರಕ್ಷಣಾ ಸಚಿವಾಲಯ ಶುಕ್ರವಾರ ಅನುಮೋದನೆ ನೀಡಿದೆ.

ದಕ್ಷಿಣ ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಚೀನಾ ಅತಿಕ್ರಮಣವನ್ನು ನಿರ್ವಹಿಸುವ ನಿಟ್ಟಿನಲ್ಲಿ ಮತ್ತು ನೌಕಾಪಡೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಇಲಾಖೆ ಮತ್ತೆ ಆರು ಹೊಸ ಸಬ್ ಮೆರಿನ್ ಗಳ ನಿರ್ಮಾಣಕ್ಕೆ ಅಸ್ತು ಎಂದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಪಿ-75 ಇಂಡಿಯಾ ಸ್ಕಾರ್ಪಿನ್ ಜಲಾಂತರ್ಗಾಮಿ ನೌಕೆಯನ್ನು ಮೇಕ್-ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲು ಶೀಘ್ರದಲ್ಲೇ ಅನುಮತಿ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಡಿಎಸಿ ಸೇನೆಗೆ ಅಗತ್ಯ ಇರುವ ರಕ್ಷಣಾ ಪರಿಕರಗಳನ್ನು ಖರೀದಿ ಮಾಡುವ ಅಥವಾ ನಿರ್ಮಾಣ ಮಾಡಲು ಹಣ ಬಿಡುಗಡೆ ಮತ್ತು ಅನುಮೋದನೆ ನೀಡುವ ಸರ್ವೋಚ್ಛ ಸಂಸ್ಥೆಯಾಗಿದೆ.SHARE THIS

Author:

0 التعليقات: