Thursday, 17 June 2021

ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ : 7 ಮಂದಿ ಸಾವು, 50 ಕ್ಕೂ ಅಧಿಕ ಮಂದಿ ನಾಪತ್ತೆ


ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ : 7 ಮಂದಿ ಸಾವು, 50 ಕ್ಕೂ ಅಧಿಕ ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಮೇಘ ಸ್ಪೋಟದಿಂದಾಗಿ ಸಿಂಧುಪಾಲ್ಚೋಕ್ ನಲ್ಲಿ ದಿಢೀರ್ ಪ್ರವಾಹ ಉಂಟಾಗಿದ್ದು ಭಾರಿ ಹಾನಿಯನ್ನುಂಟುಮಾಡಿದೆ, ಕನಿಷ್ಠ ೭ ಜನರು ಸತ್ತಿದ್ದಾರೆ ಮತ್ತು ಹಲವರು ಕಾಣೆಯಾಗಿದ್ದಾರೆ.

ಕೇಂದ್ರ ನೇಪಾಳದ ಸಿಂಧುಪಾಲಚೋಕ್ ಪ್ರಾಂತ್ಯದಲ್ಲಿ ಪ್ರವಾಹ ಸಂಭಸಿದ್ದು, ಮೇಲಮ್ಚಿ ನದಿ ಉಕ್ಕಿ ಹರಿಯುತ್ತಿದೆ. ಈ ದುರಂತದಲ್ಲಿ ಮೇಲಮ್ಚಿ ಟೌನ್ ನಲ್ಲಿ 200 ಮನೆಗಳು ಪ್ರವಾಹಕ್ಕೆ ಆಹುತಿಯಾಗಿದ್ದು, ವಿವಿಧ ದುರ್ಘಟನೆಗಳಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿ, ಹಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿನ್ನೆ ತಡರಾತ್ರಿ 7 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಕನಿಷ್ಠ 50 ಮಂದಿ ನಾಪತ್ತೆಯಾಗಿದ್ದಾರೆ. ಇವರು ಕುಡಿಯುವ ನೀರು ಯೋಜನೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ತಿಳಿದುಬಂದಿದೆ.


SHARE THIS

Author:

0 التعليقات: