Wednesday, 2 June 2021

ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ: ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ


 ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ: ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ

ಬೆಂಗಳೂರು, ಜೂ. 2: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚೇತರಿಸಿಕೊಳ್ಳುತ್ತಿದ್ದು, ನಾಳೆ(ಜೂ.3) ಸಂಜೆ ಅಥವಾ ನಾಡಿದ್ದು ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆಗಳಿವೆ.

ಜ್ವರ ಕಡಿಮೆಯಾಗಿದ್ದು ಕೊಂಚ ಪ್ರಮಾಣದ ಸುಸ್ತು ಇದೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ನಾಳೆಯವರೆಗೂ ಅವರು ಆಸ್ಪತ್ರೆಯಲ್ಲಿಯೇ ಇರಲಿದ್ದು, ನಾಳೆ ಸಂಜೆ ಅಥವಾ ನಾಡಿದ್ದು ಬೆಳಗ್ಗೆ ನಗರದ ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ನಿನ್ನೆಯಷ್ಟೇ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ಪರೀಕ್ಷೆಗೆ ಒಳಗಾಗಿರುವ ಸಿದ್ದರಾಮಯ್ಯ ಅವರಿಗೆ ಎರಡನೆ ಬಾರಿಯೂ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ತಿಳಿಸಲಾಗಿದೆ.



SHARE THIS

Author:

0 التعليقات: