Saturday, 19 June 2021

ಧೋನಿಯ ನಾಯಕತ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

ಧೋನಿಯ ನಾಯಕತ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

ಸೌತಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಟಾಸ್ ಚಿಮ್ಮಿಸಲು ನ್ಯೂಝಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಜೊತೆಗೆ ಶನಿವಾರ ಮೈದಾನಕ್ಕೆ ಇಳಿದ ವಿರಾಟ್ ಕೊಹ್ಲಿ ಗರಿಷ್ಠ ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟ್ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಮಾಜಿ ನಾಯಕ ಎಂ.ಎಸ್. ಧೋನಿಯವರ ದಾಖಲೆಯೊಂದನ್ನು ಮುರಿದರು.

ನ್ಯೂಝಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಭಾರತದ ನಾಯಕನಾಗಿ ಕೊಹ್ಲಿಗೆ 61ನೇ ಪಂದ್ಯವಾಗಿದೆ.  ಟೆಸ್ಟ್ ಪಂದ್ಯದಲ್ಲೀಗ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.

ಭಾರತವನ್ನು 60 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ್ದ ಧೋನಿ 2014ರ ಡಿಸೆಂಬರ್ ನಲ್ಲಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತರಾಗಿದ್ದರು.

 ಏಶ್ಯಾಖಂಡದಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ಪಂದ್ಯಗಳಲ್ಲಿ ನಾಯಕನಾಗಿರುವ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಶ್ರೀಲಂಕಾದ ಅರ್ಜುನ ರಣತುಂಗ ಹಾಗೂ ಪಾಕಿಸ್ತಾನದ ಮಿಸ್ಬಾವುಲ್ ಹಕ್ ತಲಾ 56 ಟೆಸ್ಟ್ ಪಂದ್ಯಗಳಲ್ಲಿ ತಮ್ಮ ದೇಶದ ತಂಡವನ್ನು ನಾಯಕನಾಗಿ ಮುನ್ನಡೆಸಿ ಕೊಹ್ಲಿ ನಂತರದ ಸ್ಥಾನದಲ್ಲಿದ್ದಾರೆ.

ಟೆಸ್ಟ ಕ್ರಿಕೆಟ್ ಇತಿಹಾಸದಲ್ಲಿ ದಕ್ಷಿಣ ಆಫ್ರಿಕಾದ ದಿಗ್ಗಜ ಗ್ರೇಮ್ ಸ್ಮಿತ್ ತಮ್ಮ ದೇಶದ ತಂಡವನ್ನು 109 ಪಂದ್ಯಗಳಲ್ಲಿ ನಾಯಕನಾಗಿ ಮುನ್ನಡೆಸುವುದರೊಂದಿಗೆ ದಾಖಲೆ ನಿರ್ಮಿಸಿದ್ದರು. ಸ್ಮಿತ್ ನಾಯಕನಾಗಿ 100ಕ್ಕಿಂತ ಹೆಚ್ಚು ಪಂದ್ಯವನ್ನಾಡಿರುವ ಏಕೈಕ ಆಟಗಾರನಾಗಿದ್ದಾರೆ. ಆಸ್ಟ್ರೇಲಿಯದ ಅಲನ್ ಬಾರ್ಡರ್ (93 ಟೆಸ್ಟ್)ಆ ನಂತರದ ಸ್ಥಾನದಲ್ಲಿದ್ದಾರೆ.


SHARE THIS

Author:

0 التعليقات: