ಸಯ್ಯಿದ್ ಹಾರೂನ್ ತಂಙಳ್ ಅನುಸ್ಮರಣಾ ಸಂಗಮ ನಾಳೆ: ಎಸ್ಸೆಸ್ಸೆಫ್ ಕರ್ನಾಟಕ
ಬೆಂಗಳೂರು ಜೂ 25: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಇತ್ತೀಚೆಗೆ ನಮ್ಮಿಂದ ಅಗಲಿದ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಮಾಜಿ ಉಪಾಧ್ಯಕ್ಷರಾಗಿದ್ದ ಸಯ್ಯಿದ್ ಹಾರೂನ್ ಅಲ್ ಬುಖಾರಿ, ಭದ್ರಾವತಿ ಅವರ ಅನುಸ್ಮರಣಾ ಸಂಗಮ ನಾಳೆ ಜೂನ್ 26, ಶನಿವಾರ ಸಂಜೆ 08:30ಕ್ಕೆ ಝೂಮ್ ಅಪ್ಲಿಕೇಶನ್ ಮೂಲಕ ಆನ್ಲೈನ್ನಲ್ಲಿ ನಡೆಯಲಿದೆ.
ಚಿಕ್ಕಮಗಳೂರು ಜಿಲ್ಲಾ ಸುನ್ನೀ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಎ.ಪಿ.ಎಸ್ ಹುಸೈನ್ ಅಲ್ ಅಹ್ದಲ್ ದುಆಃ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸಅದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೌಫಲ್ ಸಖಾಫಿ ಕಳಸ ಅನುಸ್ಮರಣಾ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಬಶ್ಶಿರ್ ಅಹ್ಸನಿ ವಂದಿಸಲಿದ್ದಾರೆ. ಸಂಘಟನೆಯ ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಧ್ಯಮ ಕಾರ್ಯದರ್ಶಿ ನವಾಝ್ ಭಟ್ಕಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 التعليقات: