ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಮೃತ್ಯು
ಬೆಳಗಾವಿ, ಜೂ.28: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸೋಮವಾರ ಉತ್ತರ ಕರ್ನಾಟಕದಲ್ಲಿ ಹತ್ತು ಜನರು ಸಾವನ್ನಪ್ಪಿದ್ದಾರೆ. ಸಾಲಭಾಧೆಯಿಂದ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದರೆ, ನದಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ.
ನಾಲ್ವರು ಸಹೋದರರು ನೀರುಪಾಲು: ಕೃಷ್ಣಾ ನದಿಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ನೀರು ಪಾಲಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಗೋಪಾಲ ಬನಸುಡೆ(36), ಸದಾಶಿವ(24), ಧರೆಪ್ಪ(22) ಹಾಗೂ ಶಂಕರ ಬನಸುಡೆ ಎಂದು ಗುರುತಿಸಲಾಗಿದೆ.
ನಾಲ್ವರು ಸಹೋದರರು ಗ್ರಾಮದಲ್ಲಿ ಜಾತ್ರೆ ಇರುವ ಕಾರಣ ಕುಟುಂಬದ ಸದಸ್ಯರ ಜೊತೆಗೆ ಬಟ್ಟೆ ತೊಳೆಯಲು ಕೃಷ್ಣಾ ನದಿಗೆ ಹೋಗಿದ್ದರು. ಈ ವೇಳೆ ಸದಾಶಿವ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೂವರೂ ಸಹೋದರರು ಸದಾಶಿವ ಜೊತೆ ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
0 التعليقات: