ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನ, ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ
ಲಕ್ನೋ / ಸಂತ ಕಬೀರ್ ನಗರ: ಹರ್ಯಾಣದ ಗುರುಗ್ರಾಮದ ಮೆದಂತಾ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದಾಗಿ ಸಂತ ಕಬೀರ್ನಗರದ ಮಾಜಿ ಬಿಜೆಪಿ ಸಂಸದ ಶರದ್ ತ್ರಿಪಾಠಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಯಕೃತ್ತು ಸಂಬಂಧಿತ ಕಾಯಿಲೆಯಿಂದ ತ್ರಿಪಾಠಿ (49 ವರ್ಷ) ಬುಧವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ತ್ರಿಪಾಠಿ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ ಎಂದು ಅವರ ಆಪ್ತ ಸಂಬಂಧಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತ ಸಂಜಯ್ ಮಿಶ್ರಾ ತಿಳಿಸಿದ್ದಾರೆ.
ತ್ರಿಪಾಠಿ 2014 ರಲ್ಲಿ ಸಂತ ಕಬೀರ್ ನಗರ ಲೋಕಸಭಾ ಸ್ಥಾನದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
ತ್ರಿಪಾಠಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಸುದ್ದಿಯು ಆಘಾತ ತಂದಿದೆ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೃತರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸಿದ್ದಾರೆ.
0 التعليقات: