Sunday, 13 June 2021

ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಭಾರಿ ಮಳೆ

ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಭಾರೀ ಮಳೆಯಾಗಲಿದೆ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.



SHARE THIS

Author:

0 التعليقات: