Friday, 4 June 2021

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ : ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟಿವೆ. ಇನ್ನೆರಡು ದಿನ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ.

ಗುರುವಾರ ರಾತ್ರಿಯಿಂದಲೇ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 6 ರವರೆಗೂ ಹೆಚ್ಚಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಚಿಕ್ಕಮಗಳೂರು, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


SHARE THIS

Author:

0 التعليقات: