Friday, 4 June 2021

ಈ ಬಾರಿಯೂ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಆಹಾರ ಧಾನ್ಯ ವಿತರಿಸಿ: ಹೈಕೋರ್ಟ್

ಈ ಬಾರಿಯೂ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಆಹಾರ ಧಾನ್ಯ ವಿತರಿಸಿ: ಹೈಕೋರ್ಟ್

ಬೆಂಗಳೂರು,: ಕೊರೋನ ಹಿನ್ನೆಲೆಯಲ್ಲಿ ಕಳೆದ ವರ್ಷ ಶಾಲೆಗಳು ಪ್ರಾರಂಭವಾಗದಿದ್ದಾಗ ಮಧ್ಯಾಹ್ನದ ಬಿಸಿಯೂಟಕ್ಕೆ ಪರ್ಯಾಯವಾಗಿ ಮಕ್ಕಳಿಗೆ ಆಹಾರ ಧಾನ್ಯ ನೀಡಿದಂತೆ ಈ ಬಾರಿಯೂ ಲಾಕ್‍ಡೌನ್ ಸಮಯದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

2021ರ ಎ.14ರಿಂದ ಇಲ್ಲಿಯವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಆದೇಶಿಸಿದೆ.


SHARE THIS

Author:

0 التعليقات: