Saturday, 5 June 2021

ಷಾರ್ಟ್‌ ಸರ್ಕೀಟ್‌ನಿಂದಾಗಿ ಬ್ಯಾಂಕ್‌ಗೆ ಬೆಂಕಿ- ಅಗ್ನಿಗಾಹುತಿಯಾದ ಮಹತ್ವದ ದಾಖಲೆಗಳು

ಷಾರ್ಟ್‌ ಸರ್ಕೀಟ್‌ನಿಂದಾಗಿ ಬ್ಯಾಂಕ್‌ಗೆ ಬೆಂಕಿ- ಅಗ್ನಿಗಾಹುತಿಯಾದ ಮಹತ್ವದ ದಾಖಲೆಗಳು

ಬೆಳಗಾವಿ: ಷಾರ್ಟ್ ಸರ್ಕಿಟ್‌ನಿಂದ ಬ್ಯಾಂಕ್‌ಗೆ ಬೆಂಕಿ ಬಿದ್ದಿರುವ ಘಟನೆ ಬೆಳಗಾವಿಯ ಕುಂದರಗಿ ಗ್ರಾಮದಲ್ಲಿ ನಡೆದಿದೆ. ಇಲ್ಲಿಯ ಮಹಾತ್ಮಾ ಗಾಂಧಿ ಕೋ ಆಪರೇಟಿವ್ ಬ್ಯಾಂಕ್‌ಗೆ ಬೆಂಕಿ ಬಿದ್ದಿದೆ.

ಮುಂಜಾನೆ ಆರು ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಂಕ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಪೀಠೋಪಕರಣಗಳು ಹಾಗೂ ದಾಖಲೆಗಳು ಬೆಂಕಿಗೆ ಆಹುತಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿ ಶಾಮಕ ದಳಕ್ಕೆ ಸ್ಥಳೀಯರು ಕರೆ ಆಡಿ ವಿಷಯ ತಿಳಿಸಿದ್ದಾರೆ. ಅವರು ಬರುವಷ್ಟರಲ್ಲಿಯೇ ಬೆಂಕಿ ತನ್ನ ಕೆನ್ನಾಲಿಗೆ ಚಾಚಿತ್ತು. ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.


SHARE THIS

Author:

0 التعليقات: