Wednesday, 16 June 2021

ಕಾಫಿನಾಡಿನಲ್ಲಿ ಧಾರಾಕಾರ ಮಳೆ : ತುಂಬಿ ಹರಿಯುತ್ತಿರುವ ನದಿಗಳು-ಪ್ರವಾಹ ಭೀತಿಯಲ್ಲಿ ಮಲೆನಾಡಿನ ಜನತೆ


ಕಾಫಿನಾಡಿನಲ್ಲಿ ಧಾರಾಕಾರ ಮಳೆ : ತುಂಬಿ ಹರಿಯುತ್ತಿರುವ ನದಿಗಳು-ಪ್ರವಾಹ ಭೀತಿಯಲ್ಲಿ ಮಲೆನಾಡಿನ ಜನತೆ

ಚಿಕ್ಕಮಗಳೂರು : ಕಳೆದ ಮೂರು ದಿನಗಳಿಂದ ಮಲೆನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲೆನಾಡಿನ ಜನರು ಹೈರಾಣಾಗಿದ್ದಾರೆ.

ಹೌದು, ಚಿಕ್ಕಮಗಳೂರು, ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್ ಆರ್ ಪುರ ತಾಲೂಕಿನಲ್ಲಿ ಕಳೆದೆರಡು ದಿನದಿಂದ ಭಾರೀ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದ ಹಿನ್ನೆಲೆ ನದಿಗಳ ಒಳ ಹರಿವು ಹೆಚ್ಚಾಗಿದ್ದು. ಭದ್ರಾ, ತುಂಗಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದೆ. ಇದರಿಂದ ಮಲೆನಾಡಿನ ಜನತೆ ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.

ಮೂಡಿಗೆರೆಯ ಚಾರ್ಮಾಡಿ ಘಾಟ್ ಹಾಗೂ ಕೊಟ್ಟಿಗೆಹಾರದ ಭಾಗದಲ್ಲಿ ಭಾರೀ ಮಳೆ ಸುರಿಯುತ್ತದೆ. ಇದರಿಂದ ಕಾಫಿನಾಡಿನಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಲೆನಾಡಿನ ಹಲವು ಕಡೆ ಮರಗಳು ಉರುಳಿ ಬಿದ್ದ ಪರಿಣಾಮ ಜನರು ಕತ್ತಲೆಯಲ್ಲಿ ಕಾಲ ಕಳೆಯುತ್ತಿದ್ದಾರೆ.


SHARE THIS

Author:

0 التعليقات: