Friday, 4 June 2021

ಮುಂಗಾರು : ಮೊದಲ ದಿನವೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ


ಮುಂಗಾರು : ಮೊದಲ ದಿನವೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ಬೆಂಗಳೂರು : ಈ ವರ್ಷ ದ ಮುಂಗಾರು ತಡವಾಗಿ ಭಾರತವನ್ನು ಪ್ರವೇಶಿಸಿದ್ದು , ಜೂನ್​. 03 ರಂದು ಕೇರಳ ಪ್ರವೇಶಿಸಿವೆ. ಕೇರಳದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು , ಇಂದು ಕರ್ನಾಟಕವನ್ನು ಪ್ರವೇಶಿಸಿವೆ ಎಂದು ತಜ್ಞರು ಹೇಳಿದ್ದಾರೆ.

ಈ ಹಿನ್ನೆಲೆ ಬೆಂಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಗುರುವಾರ ಹಾಗೂ ಶುಕ್ರವಾರ ಭಾರೀ ಮಳೆಯಾಗಿದೆ.ಇನ್ನೂ, ಈ ಬಾರಿ ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿಯಲ್ಲಿರಲಿದ್ದು ಕೇಂದ್ರ ಭಾಗದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡುಗಳಲ್ಲಿ ವಾಡಿಕೆಗಿಂತ ಕಡಿಮೆ ಅಥವಾ ಸಾಮಾನ್ಯ ಮಳೆಯಾಗಲಿದೆ' ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ದಕ್ಷಿಣ ಭಾಗಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ ಹಾಗೂ ಬೆಂಗಳೂರಿನಲ್ಲಿ ಮುಂದಿನ 36 ಗಂಟೆಗಳಲ್ಲಿ ಉತ್ತಮ ಮಳೆಯಾಗಲಿದೆ' ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮುಂದಿನ ಎರಡರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ ಆಗಲಿದ್ದು, ಜೂನ್‌ 6ಕ್ಕೆ ಮಳೆ ತಾತ್ಕಾಲಿಕವಾಗಿ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂನ್‌ 5ಕ್ಕೆ ರೆಡ್‌ ಅಲರ್ಟ್‌ ಹಾಗೂ ಜೂನ್‌ 6ಕ್ಕೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್‌.5ಕ್ಕೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್‌5ಕ್ಕೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.


SHARE THIS

Author:

0 التعليقات: