Saturday, 5 June 2021

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಂಸದ ಅಭಿಷೇಕ್‌ ಬ್ಯಾನರ್ಜಿ ನೇಮಕ


ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಂಸದ ಅಭಿಷೇಕ್‌ ಬ್ಯಾನರ್ಜಿ ನೇಮಕ

ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ, ಸಂಸದ ಅಭಿಷೇಕ್‌ ಬ್ಯಾನರ್ಜಿ ಅವರನ್ನು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬ್ಯಾನರ್ಜಿ ಶನಿವಾರ ನೇಮಕ ಮಾಡಿದ್ದಾರೆ.

ಟಿಎಂಸಿ ಹಿರಿಯ ಮುಖಂಡ ಪಾರ್ಥ ಚಟರ್ಜಿ ಅವರು ಮಾಧ್ಯಮಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. 'ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದು ಹುದ್ದೆಯನ್ನು ಮಾತ್ರ ನೀಡಬೇಕು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ. ಅದಕ್ಕೆ ಕೋರ್‌ ಕಮಿಟಿಯು ಅನುಮೋದನೆ ನೀಡಿದೆ' ಎಂದೂ ಹೇಳಿದರು.

ಈ ಹಿಂದೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಸುಬ್ರತಾ ಬಕ್ಷಿ ಅವರು ನಿರ್ವಹಿಸಿದ್ದರು. ನಟಿ ಹಾಗೂ ಟಿಎಂಸಿ ನಾಯಕಿ ಸಯೋನಿ ಘೋಷ್‌ ಅವರನ್ನು ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದಕ್ಕೂ ಮುನ್ನ ಅಭಿಷೇಕ್‌ ಈ ಹುದ್ದೆ ನಿರ್ವಹಿಸುತ್ತಿದ್ದರು.SHARE THIS

Author:

0 التعليقات: