Friday, 11 June 2021

ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯ : ಸಿಎಂ ಯಡಿಯೂರಪ್ಪ

ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯ : ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದೆ, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಮುಂದಿನ ಒಂದು ವಾರದಲ್ಲಿ ಕೊರೊನಾ ಹತೋಟಿಗೆ ಬರಲಿದೆ. ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೊರೊನಾ ಪ್ರಮಾಣ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಕೂಡ ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಎಂ ಮನವಿ ಮಾಡಿದರು.


SHARE THIS

Author:

0 التعليقات: