Sunday, 27 June 2021

ಮಂತ್ರಿ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಪಟ್ಟು; ಸಿಎಂ BSY ರಾಜ್ಯಾಧ್ಯಕ್ಷರ ಭೇಟಿಗೆ ನಿರ್ಧಾರ


ಮಂತ್ರಿ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಪಟ್ಟು; ಸಿಎಂ BSY ರಾಜ್ಯಾಧ್ಯಕ್ಷರ ಭೇಟಿಗೆ ನಿರ್ಧಾರ


ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದೀಗ ಸಿಎಂ ಬಿ ಎಸ್ ವೈ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಲು ಮುಂದಾಗಿದ್ದಾರೆ.

ಈಗಾಗಲೇ ಸ್ವಾಮೀಜಿಗಳ ಮೂಲಕ ಹಾಗೂ ಆರ್.ಎಸ್.ಎಸ್.ನಾಯಕರನ್ನು ಭೇಟಿಯಾಗುವ ಮೂಲಕ ಮಂತ್ರಿ ಸ್ಥಾನಕ್ಕಾಗಿ ಒತ್ತಡದ ತಂತ್ರ ಹೆಣೆದಿರುವ ರಮೇಶ್ ಜಾರಕಿಹೊಳಿ, ಇದೀಗ ಆಪ್ತರ ಹಾಗೂ ಸಹೋದರರ ಸಲಹೆ ಮೇರೆಗೆ ಸಿಎಂ ಭೇಟಿಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಎರಡು ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಲಿದ್ದು ಮಹತ್ವದ ರಾಜಕೀಯ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಜಾರಕಿಹೊಳಿ ನಡೆ ಕುತೂಹಲಕ್ಕೆ ಕಾರಣವಾಗಿದೆ.


SHARE THIS

Author:

0 التعليقات: