Friday, 4 June 2021

ಕೊರೊನಾ ಸೋಂಕು ಕಡಿಮೆಯಾಗದಿದ್ದರೆ 'SSLC' ಪರೀಕ್ಷೆ ಕೂಡ ರದ್ದು : ಸಿಎಂ ಯಡಿಯೂರಪ್ಪ


ಕೊರೊನಾ ಸೋಂಕು ಕಡಿಮೆಯಾಗದಿದ್ದರೆ 'SSLC' ಪರೀಕ್ಷೆ ಕೂಡ ರದ್ದು : ಸಿಎಂ ಯಡಿಯೂರಪ್ಪ

ಬೆಳಗಾವಿ : ಕೊರೊನಾ ಕಡಿಮೆಯಾಗಿ ಎಲ್ಲವೂ ಸಾಮಾನ್ಯ ಸ್ಥಿತಿಗೆ ಮರಳಿದರೆ ಮಾತ್ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು, ಇಲ್ಲವಾದಲ್ಲಿ ಪರೀಕ್ಷೆ ರದ್ದು ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇಂದು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ರದ್ದು ಮಾಡಲಾಗಿದೆ. ಅಂತೆಯೇ ಪರಿಸ್ಥಿತಿ ನೋಡಿಕೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ ಸುರೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ, ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಒಂದೆರಡು ದಿನಗಳಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದಿದ್ದಾರೆ, ಪೋಷಕರು ಗೊಂದಲ, ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.


SHARE THIS

Author:

0 التعليقات: