Friday, 16 July 2021

ಆಗಸ್ಟ್ 10ರೊಳಗೆ `ಎಸ್‌ಎಸ್‌ಎಲ್ ಸಿ' ಫಲಿತಾಂಶ : ಸಚಿವ ಸುರೇಶ್ ಕುಮಾರ್


ಆಗಸ್ಟ್ 10ರೊಳಗೆ `ಎಸ್‌ಎಸ್‌ಎಲ್ಸಿ' ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಜುಲೈ 19 ಮತ್ತು 22 ರಂದು ನಡೆಯಲಿದ್ದು, ಆಗಸ್ಟ್ 10ರೊಳಗೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರಗಳನ್ನು ಓಎಂಆರ್ ಶೀಟ್ ನಲ್ಲಿ ಗುರುತಿಸಬೇಕಷ್ಟೇ. ಹಾಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ. 10ರೊಳಗೆ ಎಸ್‌ಎಸ್‌ಎಲ್ ಸಿ ಫಲಿತಾಂಶ ನೀಡಲಾಗುವುದು ಎಂದು ಹೇಳಿದ್ದಾರೆ.


SHARE THIS

Author:

0 التعليقات: