Sunday, 18 July 2021

ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಗಳು ಪಲ್ಟಿ : 10 ಕ್ಕೂ ಹೆಚ್ಚು ಮಂದಿ ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಗಳು ಪಲ್ಟಿ : 10 ಕ್ಕೂ ಹೆಚ್ಚು ಮಂದಿ ಮೀನುಗಾರರ ರಕ್ಷಣೆ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಗಳು ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಂರು ಬಳಿಯ ಅಳಿವೆ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಮೀನುಗಾರಿಕೆಗೆ ನಿರ್ಬಂಧ ಹೇರಿದ್ದರೂ ಕೂಡ ಪಾತಿದೋಣಿ ಮೂಲಕ ಮೀನುಗಾರಿಕೆಗೆ ಐದಕ್ಕೂ ಹೆಚ್ಚು ದೋಣಿಗಳು ತೆರಳಿದ್ದವು. ಇಂದು ಭಟ್ಕಳದಲ್ಲಿ ಭಾರೀ ಗಾಳಿ ಮಳೆಯ ಅಬ್ಬರದ ಹಿನ್ನೆಲೆ ದೋಣಿ ಪಲ್ಟಿಯಾಗಿದೆ. ತಕ್ಷಣ ದಡದಲ್ಲಿದ್ದ ಸ್ಥಳೀಯ ಮೀನುಗಾರರು ಇದನ್ನು ಗಮನಿಸಿ ಅಪಾಯದಲ್ಲಿ ಸಿಲುಕಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.





SHARE THIS

Author:

0 التعليقات: